ರಾಷ್ಟ್ರೀಯ

ರಾಜಕೀಯ ವಲಯದಲ್ಲಿ ಬಾರೀ ಕುತೂಹಲಕ್ಕೆ ಕಾರಣವಾದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

Pinterest LinkedIn Tumblr

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಮಾಜಿ ಪ್ರಧಾನಿ ಸಂಸದ (ರಾಜ್ಯಸಭೆ) ಎಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ನವೆಂಬರ್ 29ರಂದು ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನದಂದು ಈ ಭೇಟಿ ನಡೆದಿದೆ . ‘ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೀ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮೂರು ರೈತ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದ ಹಿನ್ನೆಲೆಯಲ್ಲಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಮುಂದಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

 

 

Comments are closed.