ನವದೆಹಲಿ: ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಈ ದುರಂತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿರುವ ಮಾಹಿತಿಯನ್ನು ಭಾರತೀಯ ವಾಯುಸೇನಾ ಪಡೆ ದೃಢಪಡಿಸಿದೆ.
ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಆದರೆ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುವಾಗ, ಮಧ್ಯಾಹ್ನ 12.20ಕ್ಕೆ ಪತನಗೊಂಡಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ರಕ್ಷಣಾಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿಧನ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಅತ್ಯಂತ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ನನ್ನ ಭಾವನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ ಎಂದು ಹೇಳಿದ್ದಾರೆ.
ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ. ನಿಜವಾದ ದೇಶಭಕ್ತ, ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ, ಓಂ ಶಾಂತಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Comments are closed.