ಅಂತರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 45 ಸಾವು; ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿ

Pinterest LinkedIn Tumblr

Suicide-bomber

ಕಾಬುಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಕನಿಷ್ಟ 45 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವ ಆಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಸ್ಫೋಟದಿಂದಾಗಿ ಕನಿಷ್ಟ 45 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ದೌಡಾಯಿಸಿದ್ದಾರೆ.

ವಾಲಿಬಾಲ್ ಪಂದ್ಯ ನಡೆಯುತ್ತಿದ್ದರಿಂದ ಪಂದ್ಯವನ್ನು ವೀಕ್ಷಿಸಲು ಸಾಕಷ್ಟು ಮಂದಿ ಆಗಮಿಸಿದ್ದರು. ಇದೇ ಅವಕಾಶವನ್ನು ಬಳಸಿಕೊಂಡ ಉಗ್ರರು ತಮ್ಮ ದುಷ್ಕೃತ್ಯವನ್ನು ನಡೆಸಿದ್ದಾರೆ. ಸ್ಫೋಟದ ಹಿಂದೆ ತಾಲಿಬಾನ್ ಉಗ್ರರ ಕೈವಾಡವಿರುವ ಶಂಕೆ ಇದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರನ್ನು ಮಟ್ಟಹಾಕಲು ವಿಶ್ವ ಸಮುದಾಯ ಕೈಗೊಂಡಿದ್ದ ಸೇನಾ ಕಾರ್ಯಾಚರಣೆಯನ್ನು ವಿರೋಧಿಸಿದ್ದ ತಾಲಿಬಾನ್ ಉಗ್ರಸಂಘಟನೆ ಈ ವಷ್ಯಾಂತ್ಯದೊಳಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು ಎಂದು ಎಚ್ಚರಿಕೆ ನೀಡಿತ್ತು.

ಆದರೆ ಆಫ್ಘನ್ ಸರ್ಕಾರ ಕಾರ್ಯಾಚರಣೆಯನ್ನು  ಮುಂದುವರೆಸಿತ್ತು. ಇದೇ ಕಾರಣದಿಂದಾಗಿ ತಾಲಿಬಾನ್ ಉಗ್ರ ಸಂಘಟನೆ ಈ ಆತ್ಮಾಹುತಿ ದಾಳಿ ನಡೆಸಿರ ಬಹುದು ಎಂದು ಶಂಕಿಸಲಾಗುತ್ತಿದೆ.

Write A Comment