ಅಂತರಾಷ್ಟ್ರೀಯ

ಬಿಕಿನಿ ಧರಿಸಿ ಪಾರ್ಟಿ ಮಾಡುತ್ತಿದ್ದ ಯುವತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್; ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ

Pinterest LinkedIn Tumblr

bikini

ಅಮೆರಿಕಾ: ಯುವಕ- ಯುವತಿಯರ ಗುಂಪೊಂದು ಬೀಚ್ ಬಳಿ ಬಿಕಿನಿ ಧರಿಸಿ ಪಾರ್ಟಿ ಮಾಡುತ್ತಿದ್ದ ವೇಳೆ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸನೊಬ್ಬ ಯುವತಿಯೊಬ್ಬಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಅಮೆರಿಕಾದ ಟೆಕ್ಸಾಸ್ ನಲ್ಲಿ ಈ ಘಟನೆ ನಡೆದಿದ್ದು, ನಶೆಯಲ್ಲಿದ್ದ ಯುವಕ- ಯುವತಿಯರ ಗುಂಪು ತೀವ್ರ ಗದ್ದಲವೆಬ್ಬಿಸಿತ್ತೆನ್ನಲಾಗಿದೆ. ಅಲ್ಲದೇ ಈ ಗುಂಪು ಪರಸ್ಪರ ಹೊಡೆದಾಡಿಕೊಂಡಿದ್ದು ಇವರ ಕಿರಿಕಿರಿಯಿಂದ ರೋಸತ್ತ ಸಾರ್ವಜನಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಗುಂಪು ಈ ಮಾತಿಗೆ ಕಿವಿಗೊಡಲಿಲ್ಲವೆನ್ನಲಾಗಿದೆ.

ಅಲ್ಲದೇ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದು, ಆಗ ಪೊಲೀಸ್ ಅಧಿಕಾರಿಯೊಬ್ಬ ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಿಡಿಸಿಕೊಳ್ಳಲು ಬಂದ ಮತ್ತೊಬ್ಬನನ್ನು ಪೊಲೀಸರು ಹಿಡಿದು ಚಚ್ಚಿದ್ದು, ಈ ದೃಶ್ಯಗಳನ್ನು ರೆಕಾರ್ಡ್ ಮಾಡಿಕೊಂಡಿದ್ದವರೊಬ್ಬರು ಇದನ್ನು ಸಾಮಾಜಿಕ ಜಾಲ ತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ವಿಡಿಯೋ ದೃಶ್ಯಾವಳಿಗಳನ್ನಾಧರಿಸಿ ಪೊಲೀಸ್ ಅಧಿಕಾರಿಯನ್ನು ರಜೆ ಮೇಲೆ ಕಳುಹಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

Write A Comment