ಅಂತರಾಷ್ಟ್ರೀಯ

ಯೋಗ ದಿನಾಚರಣೆಯಂದು ನ್ಯೂಯಾರ್ಕ್ ನಲ್ಲಿ 30 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ

Pinterest LinkedIn Tumblr

yoga

ನ್ಯೂಯಾರ್ಕ್: ಜೂ.21 ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 30 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದ್ದು ಟೈಮ್ಸ್ ಸ್ಕ್ವೇರ್ ನಲ್ಲಿ ಬೃಹತ್ ಸಂಖ್ಯೆಯಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

ಯೋಗ ದಿನಾಚರಣೆ ಅಂಗವಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಭಾಷಣ ಮಾಡಲಿದ್ದಾರೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ಅಶೋಕ್ ಕುಮಾರ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಭಾರತದ ಯೋಗ ದಿನಾಚರಣೆ ಪ್ರಸ್ತಾವನೆಗೆ ಬೆಂಬಲ ವ್ಯಕ್ತಪಡಿಸಿರುವ ಇತರ ರಾಷ್ಟ್ರಗಳ ಪ್ರತೀನಿಧಿಗಳೊಂದಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹ ಭಾಷಣ ಮಾಡಲಿದ್ದಾರೆ.

ಆರ್ಟ್ ಆಫ್ ಲಿವಿಂಗ್ ನ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಯೋಗದ ಲಾಭಗಳ ಬಗ್ಗೆ ಮಾತನಾದಿರುವ ವಿಡಿಯೋ ಪ್ರಸಾರವಾಗಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಟೈಮ್ಸ್ ಸ್ಕ್ವೇರ್ ನಲ್ಲಿ ನಡೆಯಲಿರುವ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.

ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಯು.ಎನ್ ನೆಟ್ವರ್ಕ್ ನಲ್ಲಿ ವೆಬ್ಕಾಸ್ಟ್ ಮಾಡಲಾಗುತ್ತದೆ. ಎನ್.ಎ.ಎಸ್.ಡಿ.ಎ.ಕ್ಯೂ ಮಾರುಕಟ್ಟೆ ಕಟ್ಟಡದಲ್ಲಿರುವ ಏಳು ಅಂತಸ್ತಿನ ಎತ್ತರದ ವೀಡಿಯೊ ಪರದೆಯಲ್ಲಿ ಯೋಗ ಪ್ರದರ್ಶನವನ್ನು ಪ್ರಸಾರ ಮಾಡಲಾಗುತ್ತದೆ. ತೃಪ್ತಿಯ ಭಾವವನ್ನು ಯೋಗ ಹುಡುಕಿಕೊಡುತ್ತದೆಯೇ ಹೊರತು, ಅದು ಜನರನ್ನು ವಿಭಜಿಸುವುದಿಲ್ಲ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಯೋಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Write A Comment