ಅಂತರಾಷ್ಟ್ರೀಯ

ಅಮೆರಿಕದ ನಿರ್ಬಂಧ ಕ್ಯೂಬಾದ ಆರ್ಥಿಕ ಪ್ರಗತಿಗೆ ಅಡ್ಡಿ: ಕ್ಯೂಬಾದ ಅಧ್ಯಕ್ಷ ರೌಲ್ ಕ್ಯಾಸ್ಟ್ರೊ

Pinterest LinkedIn Tumblr

3raul-castroವಿಶ್ವಸಂಸ್ಥೆ, ಸೆ.27: ಕ್ಯೂಬಾದ ಆರ್ಥಿಕ ಅಭಿವೃದ್ಧಿಗೆ ಅದರ ವಿರುದ್ಧ ಅಮೆರಿಕ ವಿಧಿಸಿರುವ ನಿರ್ಬಂಧಗಳು ಪ್ರಮುಖ ಅಡ್ಡಿಯಾಗಿವೆ ಎಂದು ಕ್ಯೂಬಾದ ಅಧ್ಯಕ್ಷ ರೌಲ್ ಕ್ಯಾಸ್ಟ್ರೊ ಅಭಿಪ್ರಾಯಿಸಿದ್ದಾರೆ.
ವಿಶ್ವಸಂಸ್ಥೆಯ ಮಹಾಧಿವೇಶನದ ನೇಪಥ್ಯದಲ್ಲಿ ಶನಿವಾರ ನ್ಯೂಯಾರ್ಕ್‌ನಲ್ಲಿ ನಡೆದ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಸ್ಟ್ರೊ, ಕ್ಯೂಬಾದ ವಿರುದ್ಧದ ದಶಕಗಳಷ್ಟು ಹಳೆಯ ನಿರ್ಬಂಧಗಳನ್ನು ಕೊನೆಗೊಳಿಸಲು ಕರೆ ನೀಡಿರುವ ವಿಶ್ವಸಂಸ್ಥೆಯ ನಿರ್ಣಯದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಕ್ಯೂಬಾ ವಿರುದ್ಧ ನಿರ್ಬಂಧಗಳನ್ನು ಕೊನೆಗೊಳಿಸುವಂತೆ ಒತ್ತಾಯಿಸುವ ನಿರ್ಣಯಕ್ಕೆ ಅಂಗೀಕಾರ ನೀಡುವಂತೆ 1982ರಿಂದಲೂ ಪ್ರತಿವರ್ಷ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಮತದಾನ ನಡೆಸಲಾಗುತ್ತಿದೆ. 1960ರಿಂದಲೂ ಕ್ಯೂಬಾ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರವಾಗಿದೆ. ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಆಡಳಿತವು ಕ್ಯೂಬಾ ವಿರುದ್ಧದ ನಿರ್ಬಂಧಗಳನ್ನು ತೆರವುಗೊಳಿಸುವ ಬಗ್ಗ ಬೆಂಬಲ ಸೂಚಿಸಿದೆಯಾದರೂ, ರಿಪಬ್ಲಿಕನ್ ಪ್ರಾಬಲ್ಯವಿರುವ ಅಲ್ಲಿನ ಕಾಂಗ್ರೆಸ್ ಈ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ.

Write A Comment