ಇಸ್ಲಾಮಾಬಾದ್: ಭಾರತದೊಂದಿಗೆ ಯುದ್ಧ ಮಾಡುವುದು ನಮ್ಮ ಅಯ್ಕೆಯಾಗಿರುವುದಿಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ, ಸ್ನೇಹ ಸಂಬಂಧವನ್ನು ಮುಂದುವರೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕ್ ಅಧ್ಯಕ್ಷ ಮಮೂನ್ ಹುಸೇನ್ ಅವರೊಂದಿಗಿನ ಭೇಟಿವೇಳೆ ಷರೀಫ್ ಸ್ಪಷ್ಟಪಡಿಸಿದ್ದಾರೆ.
ಅಮೇರಿಕ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳು ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದುವುದನ್ನು ಎದುರುನೋಡುತ್ತಿದ್ದು ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಾಕಿಸ್ತಾನ ಸದಾ ಸಿದ್ಧವಿದೆ ಎಂದು ಷರೀಫ್ ಪಾಕ್ ಅಧ್ಯಕ್ಷರಿಗೆ ತಿಳಿಸಿದ್ದಾರೆ.
ಪಾಕ್ ಅಧ್ಯಕ್ಷರೊಂದಿಗೆ ನವಾಜ್ ಷರೀಫ್ ಅಲ್ಲಿನ ಸ್ಥಳೀಯ ಸ್ಥಿತಿಗತಿಗಳ ಬಗ್ಗೆ ಹಾಗೂ ನೆರೆ ರಾಷ್ಟ್ರಗಳೊಂದಿಗಿನ ಸಂಬಂಧದ ಚರ್ಚೆ ನಡೆಸಿದ್ದಾರೆ. ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದರಿಂದ ಪಾಕಿಸ್ತಾನ- ಭಾರತದ ನಡುವಿನ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಂಡಿದೆ.