ಅಂತರಾಷ್ಟ್ರೀಯ

ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪಾಕಿಸ್ತಾನದ ಪ್ರಸ್ತಾವನೆ

Pinterest LinkedIn Tumblr

sartaj-ajijfffಇಸ್ಲಾಮಾಬಾದ್: ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್, ಭಾರತದೊಂದಿಗೆ ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪ್ರಸ್ತಾವನೆ ನೀಡಿದ್ದಾರೆ.

ಪಾಕಿಸ್ತಾನದ ಪ್ರಸ್ತಾವನೆಗೆ ಭಾರತದ ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದೇವೆ ಎಂದು ಸರ್ತಾಜ್ ಅಜೀಜ್ ಹೇಳಿರುವುದನ್ನು ಡಾನ್ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ. ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆ ಇಸ್ಲಾಮಾಬಾದ್ ನಲ್ಲಿ ನಡೆಯಲಿದ್ದು, ಇತ್ತೀಚೆಗಷ್ಟೇ ಪಾಕ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ ನೀಡಿದ್ದ ವೇಳೆ ಉಭಯ ದೇಶಗಳ ನಡುವಿನ ಸೌಹಾರ್ದಯುತ ಸಂಬಂಧವನ್ನು ಮುಂದುವರೆಸಲು ನಿರ್ಧರಿಸಲಾಗಿತ್ತು.

ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ನಡೆದರೆ ಕಾಶ್ಮೀರ, ಸಿಯಾಚಿನ್, ಟುಲ್ಬುಲ್ ನ್ಯಾವಿಗೇಶನ್ ಪ್ರಾಜೆಕ್ಟ್, ಆರ್ಥಿಕ, ವಾಣಿಜ್ಯ ಸಹಕಾರ ಚರ್ಚೆಗೆ ಬರಲಿರುವ  ಪ್ರಮುಖ ವಿಷಯಗಳಾಗಿವೆ.

Write A Comment