ಅಂತರಾಷ್ಟ್ರೀಯ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಸಾವು, 25 ಮಂದಿಗೆ ಗಾಯ

Pinterest LinkedIn Tumblr

pak-blastಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳವಾರ ಸರ್ಕಾರಿ ಕಚೇರಿ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದು, ದಾಳಿಯಲ್ಲಿ 18 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಯುವ್ಯ ಪಾಕಿಸ್ತಾನದಲ್ಲಿ ಮರ್ದಾನ್‌ ಬಳಿಯ ಖೈಬರ್‌ ಪಖ್ತುಂಕ್ವಾ ಪ್ರಾಂತ್ಯದ ರಾಷ್ಟ್ರೀಯ ದತ್ತಾಂಶ ಮತ್ತು ನೋಂದಣಿ ಪ್ರಾಧಿಕಾರದ ಕಚೇರಿ ಎದುರು ಉಗ್ರರು ಇಂದು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.

ಸ್ಫೋಟದ ತೀವ್ರತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.

ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹಾಗೂ ಆಂತರಿಕ ಸಚಿವ ಚೌಧರಿ ನಿಸಾರ್ ಅಲಿಖಾನ್ ಅವರು ಅವರು ಈ ದಾಳಿಯನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

Write A Comment