ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಏಕೆಂದರೆ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತಹೀನತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ.
ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ ವಿಟಮಿನ್, ಖನಿಜಾಂಶಗಳು ಹೇರಳವಾಗಿರುವುದರಿಂದ ಕೆಲವು ಪ್ರಮುಖ ಕಾಯಿಲೆಗಳ ನಿವಾರಣೆಗೆ ಸಹಾಯ ಮಾಡುತ್ತದೆ.
ಹೃದ್ರೋಗ ಸಮಸ್ಯೆ ಕಡಿಮೆ ಮಾಡಲು ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ತುಂಬಾ ಒಳ್ಳೆಯದು.
ಗರ್ಭಿಣಿಯಾದಾಗ ಕೆಲವರಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದರೆ ಖರ್ಜೂರ ತಿಂದರೆ ಸಾಕು, ದೇಹದಲ್ಲಿ ರಕ್ತಕಣಗಳು ಹೆಚ್ಚಾಗಿ ಆರೋಗ್ಯ ವದ್ಧಿಸುವುದಲ್ಲದೆ ಭ್ರೂಣದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಹೆರಿಗೆಯ ನಂತರ ಎದೆಯಲ್ಲಿ ಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ ಖರ್ಜೂರ. ಖರ್ಜೂರ ಹಾಕಿ ಕಾಯಿಸಿದ ಹಾಲಿನಿಂದ ಮಕ್ಕಳಿಗೆ ಪೋಷಕಾಂಶ ಸಿಗುವುದು.
ಮಲಬದ್ಧತೆ ಸಮಸ್ಯೆಯಿದ್ದರೆ ರಾತ್ರಿಯಲ್ಲಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಖರ್ಜೂರದಲ್ಲಿ ಎ ಹಾಗೂ ಪ್ರಮಾಣ ಅಧಿಕವಿರುವುದರಿಂದ ಇರುಳು ಕುರುಡು ಸಮಸ್ಯೆ ನಿವಾರಣೆಯಾಗುವುದು. ಸಂಧಿ ನೋವು ಹೆಚ್ಚಿನವರಲ್ಲಿ ಕಂಡುಬರುವ ಸಮಸ್ಯೆ. ಮೂಳೆಯಲ್ಲಿ ಕ್ಯಾಲ್ಸಿಯಂ ಅಂಶ ಕಡಿಮೆ ಇರುವುದರಿಂದ ಹೀಗಾಗುವುದು. ಖರ್ಜೂರದಲ್ಲಿ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯವನ್ನು ವೃದ್ಧಿಸುವುದು.
ಖರ್ಜೂರಗಳು ಪ್ರೋಟಿನ್‌ಗಳ ಆಗರವಾಗಿದೆ. ಹೀಗಾಗಿ ಇವುಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ನಮ್ಮ ದೇಹವನ್ನು ನಿರ್ಮಿಸುವ ಇಟ್ಟಿಗೆಗಳು ಎಂದು ಹೇಳಬಹುದು.