ವಾಷಿಗ್ಟಂನ್: ಐಸಿಸ್ ಭಯೋತ್ಪಾದಕ ಸಂಘಟನೆಯು ರಾಸಾಯನಿಕ ಶಸ್ತ್ರಾಸ್ತ್ರ ನಿರ್ವಿುಸುವಲ್ಲಿ ಪ್ರಾವಿಣ್ಯತೆ ಪಡೆದಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ರಾಸಾಯನಿಕ ಶಸ್ತ್ರಾಸ್ತ ಹಾಗೂ ಮಸ್ಟರ್ಡ್ ಗ್ಯಾಸ್ ನಿರ್ಮಿಸುವ ಸಾಮರ್ಥ್ಯ ಹೊಂದಿದೆ ಎಂದು ಸಿಐಎ ನಿರ್ದೇಶಕ ಜಾನ್ ಬ್ರೆನ್ನನ್ ಹೇಳಿದ್ದಾರೆ.
ಖಾಸಗಿ ವಾಹನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಿಂದ ರಾಸಾಯನಿಕ ಶಸ್ತ್ರಾಸ್ತ್ರ ಉತ್ಪಾದನೆಯಲ್ಲಿ ತೊಡಗಿರುವ ಐಸಿಸ್ ಹಣಕ್ಕಾಗಿ ವಿದೇಶಗಳಿಗೆ ಈ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.