ಅಂತರಾಷ್ಟ್ರೀಯ

ಅಮೆರಿಕದಲ್ಲಿ ಗುಂಡಿನ ದಾಳಿ: ನಾಲ್ವರು ಸಾವು

Pinterest LinkedIn Tumblr

2

ಕನ್ಸಾಸ್‌ (ಅಮೆರಿಕ): ಇಲ್ಲಿನ ಕನ್ಸಾಸ್‌ ಪಟ್ಟಣದಲ್ಲಿರುವ ಖಾಸಗಿ ಕಾರ್ಖಾನೆಯೊಂದರಲ್ಲಿ ನೌಕರನೊಬ್ಬ ಸಿಬ್ಬಂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ 14 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮೇಲೆ ಗುಂಡಿನದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಅಮೆರಿಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Write A Comment