ಅಂತರಾಷ್ಟ್ರೀಯ

ಭಾರತದ ಯುವಕರನ್ನು ಹೊಗಳಿದ ಟ್ರಂಪ್

Pinterest LinkedIn Tumblr

troವಾಷಿಂಗ್ಟನ್: ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಡೋನಾಲ್ಡ್ ಟ್ರಂಪ್, ಇದೀಗ ಭಾರತದ ಯುವಕರನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ.

ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಭಾರತೀಯರನ್ನು ದೇಶದಿಂದ ಆಚೆ ಕಳಿಸುವುದಿಲ್ಲ. ಇಂತಹ ಚುರುಕು ವ್ಯಕ್ತಿಗಳು ನಮ್ಮ ದೇಶಕ್ಕೆ ಬೇಕು ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ನಾವು ಅನೇಕ ಮಂದಿಯನ್ನು ಶಿಕ್ಷಣವಂತರನ್ನಾಗಿ ಮಾಡಿದ್ದೇವೆ. ಅವರ ಚುರುಕುತನಕ್ಕೆೆ ಮೆಚ್ಚಬೇಕು. ಇಂತಹ ಚುರುಕು ವ್ಯಕ್ತಿಗಳ ಅಗತ್ಯತೆ ನಮ್ಮ ದೇಶಕ್ಕಿದೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.

ಭಾರತದ ವಿದ್ಯಾರ್ಥಿಗಳು ನಮ್ಮ ವಿಶ್ವವಿದ್ಯಾಲಯಗಳಲ್ಲಿ ಕಲಿಯುತ್ತಾರೆ. ಎಲ್ಲಾ ವಿಷಯಗಳಲ್ಲೂ ಮಂಚೂಣಿಯಲ್ಲಿದ್ದಾರೆ. ಇವರು ಮತ್ತೆ ಭಾರತಕ್ಕೆೆ ತೆರಳಿ ಕಂಪನಿಗಳನ್ನು ಸ್ಥಾಪಿಸಿ, ಅನೇಕರಿಗೆ ಉದ್ಯೋಗ ನೀಡುತ್ತಾರೆ. ಅವರಲ್ಲಿ ಅನೇಕರಿಗೆ ಅಮೆರಿಕದಲ್ಲಿರಲು ಆಸೆ ಇದೆ. ಅನೇಕ ವರ್ಷಗಳಿಂದ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹೊರಹಾಕುವುದಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಅಮೆರಿಕದ ಜನ ಡೊನಾಲ್ಡ್ ಟ್ರಂಪ್‌ರನ್ನು ಅಧ್ಯಕ್ಷರನ್ನಾಗಿ ಮಾಡುವುದಿಲ್ಲ ಎಂಬ ನಂಬಿಕೆ ಇರುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ. ಟ್ರಂಪ್ ಅಧ್ಯಕ್ಷರಾದರೆ ಅನೇಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

Write A Comment