ಅಂತರಾಷ್ಟ್ರೀಯ

ಜಪಾನ್ ನಲ್ಲಿ ಮತ್ತೆ ಪ್ರಬಲ ಭೂಕಂಪ: 11 ಸಾವು, ಹಲವರಿಗೆ ಗಾಯ

Pinterest LinkedIn Tumblr

Cracks caused by an earthquake are seen in a parking lot in Minamiaso town, Kumamoto prefecture. REUTERS/Kyodo

ಟೋಕಿಯೋ: ಜಪಾನ್ ನಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7.3ರಷ್ಟು ದಾಖಲಾಗಿರುವುದಾಗಿ ಶನಿವಾರ ತಿಳಿದುಬಂದಿದೆ.

ಈಗಾಗಲೇ ಸುಮಾರು 22ಕ್ಕೂ ಹೆಚ್ಚು ಭಾರಿ ಭೂಮಿ ಕಂಪಸಿದ್ದು, ಜಪಾನ್ ಸಾಕಷ್ಟು ಹಾನಿಗೊಳಗಾಗಿರುವುದಾಗಿ ತಿಳಿದುಬಂದಿದೆ. ಇಂದು ಬೆಳಿಗ್ಗೆ 1.25ರ ಸುಮಾರಿಗೆ ಭೂಕಂಪವಾಗಿದ್ದು, ಭೂಕಂಪದ ಪರಿಣಾಮ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

ಇನ್ನು ಭೂಕಂಪದ ಪರಿಣಾಮ ಅನೇಕ ಕಡೆ ಮನೆಗಳು ಹಾಗೂ ಕಟ್ಟಡಗಳು ಕುಸಿದು ಬಿದ್ದಿವೆ. ಇದಲ್ಲದೆ ಹಲವೆಡೆ ಅಗ್ನಿ ಅವಘಡಗಳಂತಹ ಘಟನೆಗಳು ನಡೆದಿರುವುದಾಗಿ ವರದಿಗಳು ತಿಳಿಸಿವೆ. ಇದರ ಪರಿಣಾಮ ಜಪಾನ್ ಅನೇಕ ರಸ್ತೆಗಳು ಬಂದ್ ಆಗಿವೆ. ಅಲ್ಲದೆ, ವಿದ್ಯುತ್ ಸಮಸ್ಯೆ ಎದುರಾಗಿದೆ.

ಇನ್ನು ಘಟನೆಯಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಹೇಳಲಾಗುತ್ತಿದೆ. ಕಟ್ಟಡಗಳು ಕುಸಿದು ಬಿದ್ದ ಪರಿಣಾಮ ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭೂಕಂಪದ ಕೇಂದ್ರ ಬಿಂದು ಹುಡುಕುವಲ್ಲಿ ಭೂಕಂಪ ಶಾಸ್ತ್ರಜ್ಞರು ಹರಸಾಹಸ ಪಡುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಜಪಾನ್ ಪ್ರಧಾನಮಂತ್ರಿ ಶಿನ್ಝೋ ಅಬೆ ಅವರು, ಭೂಕಂಪದಿಂದ ದೇಶ ಸಾಕಷ್ಟು ಹಾನಿಗೊಂಡಿದ್ದು, ಹಾನಿಯನ್ನು ಸರಿಪಡಿಸಲು ಸರ್ಕಾರ ತನ್ನಿಂದ ಆಗುವ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Write A Comment