ಆಕ್ಲೆಂಡ್: ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮೇಕ್ ಇನ್ ಇಂಡಿಯಾದೊಂದಿಗೆ ಕೈ ಜೋಡಿಸುವಂತೆ ಕರೆ ನೀಡಿದ್ದಾರೆ.
ನ್ಯೂಜಿಲ್ಯಾಂಡ್ ನ ಗೌರ್ನರ್ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಣಬ್ ಮುಖರ್ಜಿ “ಡೇರಿ ಉದ್ಯಮ, ಆಹಾರ ಸಂಸ್ಕರಣೆ, ಸಂವಹನ ಹಾಗೂ ಮಾಹಿತಿ ತಂತ್ರಜ್ಞಾನದ ವಿಷಯದಲ್ಲಿ ನ್ಯೂಜಿಲ್ಯಾಂಡ್ ಅದ್ಭುತ ಪ್ರಗತಿ ಸಾಧಿಸಿದೆ, ಈ ಸಾಲಿಗೆ ಆರೋಗ್ಯ ಸೇವೆ, ವಿಪತ್ತು ನಿರ್ವಹಣೆ ಕ್ಷೆತ್ರಗಳೂ ಸೇರಿವೆ ಎಂದು ಹೇಳಿದ್ದಾರೆ.
ನ್ಯೂಜಿಲ್ಯಾಂಡ್ ಪ್ರಗತಿ ಸಾಧಿಸಿರುವ ಕ್ಷೇತ್ರಗಳಲ್ಲಿ ನಾವು ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಿ, ಹೊಸ ಮತ್ತು ನವೀನ ಮಾದರಿಯ ತಂತ್ರಜ್ಞಾವನ್ನು ಅಭಿವೃದ್ಧಿಪಡಿಸಲು ಉತ್ಸುಕರಾಗಿದ್ದೇವೆ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸಮಾನ ಆಸಕ್ತಿ ವಿಷಯಗಳಲ್ಲಿ ನ್ಯೂಜಿಲ್ಯಾಂಡ್ ನೊಂದಿಗೆ ಹೊಸ ಪಾಲುದಾರಿಕೆಯನ್ನು ಎದುರುನೋಡುತ್ತಿddu ಇಲ್ಲಿನ ಉದ್ಯಮಿಗಳು ಮೇಕ್ ಇನ್ ಇಂಡಿಯಾ ಯೋಜನೆಯೊಂದಿಗೆ ಕೈ ಜೋಡಿಸಬಹುದೆಂದು ಕರೆ ನೀಡಿದ್ದಾರೆ.