
ಬ್ಯಾಂಕಾಕ್: ಒಗ್ಗಟ್ಟಿನಲ್ಲಿ ಬಲವಿದೆ, ಜನರು ಒಟ್ಟಿಗೆ ಸೇರಿದಾಗ ಎಂತಹ ಕೆಲಸವನ್ನೂ ಸಹ ಸುಲಭವಾಗಿ ಸಾಧಿಸಬಹುದು ಎಂಬುದು ಹಲವಾರು ನಿದರ್ಶನಗಳಲ್ಲಿ ಸಾಬೀತಾಗಿದೆ. ಇದಕ್ಕೆ ತಾಜಾ ನಿದರ್ಶನವೆಂದರೆ ಥಾಯ್ಲೆಂಡ್ನ ಗ್ರಾಮವೊಂದರಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಮನೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸ್ಥಳಾಂತರಿಸಿದ್ದಾರೆ.
ಥಾಯ್ಲೆಂಡ್ನಲ್ಲಿ ಮರದ ಮನೆಯನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಯಾವುದೇ ಯಾಂತ್ರಿಕ ಬಲವಿಲ್ಲದೆ ಗ್ರಾಮಸ್ಥರೆಲ್ಲಾ ಒಟ್ಟಿಗೆ ಸೇರಿ ಸಾಗಿಸಿದ್ದಾರೆ. ಇದಕ್ಕಾಗಿ ಹತ್ತಾರು ಜನರು ಒಟ್ಟಿಗೆ ಶ್ರಮಿಸಿದ್ದು, ಕರಾರುವಕ್ಕಾಗಿ ತಮ್ಮ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಇವರ ಸಂಘಟಿತ ಶ್ರಮದಿಂದ ಮನೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುರಕ್ಷಿತವಾಗಿ ಸ್ಥಳಾಂತರವಾಗಿದೆ.
ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಇದರ ಕುರಿತು ಸಾಕಷ್ಟು ಚರ್ಚೆ ಸಹ ನಡೆಯುತ್ತಿದೆ.