ಅಂತರಾಷ್ಟ್ರೀಯ

88ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಯುವಕ ! ಆಸ್ಪತ್ರೆಅಯಲ್ಲಿ ವೃದ್ಧೆ ಸಾವು

Pinterest LinkedIn Tumblr

rape1

ಕ್ಯಾಂಡಿ: 88 ವರ್ಷದ ವೃದ್ಧೆಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಶ್ರೀಲಂಕಾದ ಕ್ಯಾಂಡಿ ಎಂಬಲ್ಲಿ ನಡೆದಿದೆ.

30 ವರ್ಷದ ಯುವಕ 88ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎರಡು ದಿನಗಳ ಬಳಿಕ ವೃದ್ಧೆ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ರಂಗಲ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಟೆಲ್ಡೇನಿಯಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೇ 20 ವರೆಗೆ ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ಒಪ್ಪಿಸಿದೆ ಎಂದು ಶ್ರೀಲಂಕಾದ ಮಾಧ್ಯಮಗಳು ವರದಿ ಮಾಡಿವೆ.

Write A Comment