ಮಾಗ್ನಾವಿಲೆ (ಫ್ರಾನ್ಸ್), ಜೂ.14- ಇಲ್ಲಿನ ಪೊಲೀಸ್ ವಸತಿ ಸಮುಚ್ಚಯದಲ್ಲಿ ತಡರಾತ್ರಿ ದಾಳಿ ನಡೆಸಿದ ವ್ಯಕ್ತಿಯೊಬ್ಬ ಪೊಲೀಸ್ ಹಾಗೂ ಅವರ ಪತ್ನಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಇದು ಉಗ್ರರ ಕೃತ್ಯ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಹಂತಕನನ್ನು ಐಎಸ್ ಸಂಘಟನೆಗೆ ಸೇರಿದ ಲರೊಸ್ಸಿ ಅಬ್ಸಲ್ಲಾ ( 25) ಎಂದು ಗುರುತಿಸಲಾಗಿದ್ದು, ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಪಾಕಿಸ್ಥಾನದ ಜಿಹಾದಿ ಗುಂಪಿಗೆ ಸೇರಿದ ಈ ವ್ಯಕ್ತಿ ರಾತ್ರಿ ಈ ಕೃತ್ಯ ಎಸಗಿದ್ದಾನೆ.
ಈ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ಫ್ರಾಂಕೋಯಿಸ್ ಹೊಲಾಂಡೆ ಸಂಪುಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ. ಪ್ರಸ್ತುತ ಫ್ರಾನ್ಸ್‌ನಲ್ಲಿ ಫುಟ್‌ಬಾಲ್ ಪಂದ್ಯಾವಳಿ ನಡೆಯುತ್ತಿರುವುದರಿಂದ ಈಗಾಗಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
Comments are closed.