ಅಂತರಾಷ್ಟ್ರೀಯ

ಹಿಜ್ಬುಲ್ ಮುಖಂಡನ ಹತ್ಯೆ; ಕಳವಳ ವ್ಯಕ್ತ ಪಡಿಸಿದ ನವಾಜ್ ಶರೀಫ್

Pinterest LinkedIn Tumblr

Nawaz-Sharifಇಸ್ಲಾಮಾಬಾದ್ : ಹಿಜ್ಬುಲ್‌ ಮುಜಾಹಿದ್ದಿನ್‌ ಉಗ್ರ ಸಂಘಟನೆಯ ಕಮಾಂಡರ್‌ ಬುರ್ಹಾನ್‌ ವಾನಿ ಹತ್ಯೆಯ ಬಳಿಕ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್, ವಾನಿ ಹತ್ಯೆಯ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಹೃದಯ ಸರ್ಜರಿ ಬಳಿಕ ಲಂಡನ್‍ನಿಂದ ವಾಪಸ್ ಆಗಿರುವ ಶರೀಫ್, ಕಾಶ್ಮೀರದಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಾನಿ ಅವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಭಾರತದ ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ಪಡೆ ದೌರ್ಜನ್ಯವೆಸಗುತ್ತಿದೆ ಎಂದು ಶರೀಫ್ ಅವರ ಕಚೇರಿಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಅದೇ ವೇಳೆ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಾಕ್ ಪಿಎಂ, ಭಾರತ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕಾಗಿದೆ ಎಂದಿದ್ದಾರೆ.

Comments are closed.