ಅಂತರಾಷ್ಟ್ರೀಯ

ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹವಾಗಲಿ: ನವಾಜ್ ಷರೀಫ್‌

Pinterest LinkedIn Tumblr

nawajಇಸ್ಲಾಮಾಬಾದ್ (ಪಿಟಿಐ): ಕಾಶ್ಮೀರ ಕೇವಲ ಭಾರತದ ಆಂತರಿಕ ವಿಷಯವಲ್ಲ. ಕಾಶ್ಮೀರಿಗಳಿಗೆ ಹಕ್ಕುಗಳನ್ನು ನೀಡಲು ಭಾರತ ಜನಾಭಿಪ್ರಾಯ ಸಂಗ್ರಹ ಮಾಡಬೇಕು ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.

ಕಾಶ್ಮೀರ ಜನರಿಗೆ ಬೆಂಬಲ ಸೂಚಿಸಲು ಕರಾಳ ದಿನ ಆಚರಿಸಲಾಗುವುದು. ಈ ಮೂಲಕ ಪಾಕಿಸ್ತಾನ ಕಾಶ್ಮೀರ ಜನರ ಪರವಾಗಿದೆ ಎಂಬ ಸಂದೇಶ ರವಾನಿಸಲಾಗುವುದು ಎಂದು ಷರೀಫ್ ತಿಳಿಸಿದ್ದಾರೆ.

ಭಾರತ ಕಾಶ್ಮೀರ ಜನರ ಧ್ವನಿ ಅಡಗಿಸಲು ಭದ್ರತಾ ಪಡೆಗಳನ್ನು ಬಳಸಿಕೊಳ್ಳುತ್ತಿದೆ. ವಿಶ್ವಸಂಸ್ಥೆ ಕೂಡಲೇ ಮಧ್ಯಪ್ರವೇಶಿಸಿ ಕಾಶ್ಮೀರವನ್ನು ವಿವಾದಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತ ಕಾಶ್ಮೀರವನ್ನು ಅತಿಕ್ರಮಣ ಮಾಡಿಕೊಂಡು ಅಲ್ಲಿನ ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

Comments are closed.