ಕಠ್ಮಂಡು(ಪಿಟಿಐ): ನವಜಾತ ಶಿಶು ಹಾಗೂ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಶಿಶು ಸೇರಿದಂತೆ ಏಳು ಮಂದಿ ಮೃತಪಟ್ಟ ದುರ್ಘಟನೆ ನೇಪಾಳದಲ್ಲಿ ಸೋಮವಾರ ಸಂಭವಿಸಿದೆ.
ಕಠ್ಮಡುವಿನಿಂದ 150 ಕಿ.ಮೀ. ದೂರದ ನುವಕೊಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲ ಸಮಯದ ಬಳಿಕ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಅದರಲ್ಲಿದ್ದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ನೇಪಾಳದ ವಿಮಾನಯಾನ ಸಂಸ್ಥೆ ತಿಳಿಸಿದೆ.
Comments are closed.