ಕರಾಚಿ (ಪಿಟಿಐ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾದ ಆಸ್ಪತ್ರೆ ಬಳಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ.
ಅಲ್ ಖೇರ್ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಭಯೋತ್ಪಾದನೆ ನಿಗ್ರಹ ದಳಕ್ಕೆ ಸೇರಿದ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಘಟನೆಯಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ‘ದಿ ಡಾನ್’ ಪತ್ರಿಕೆ ವರದಿ ಮಾಡಿದೆ.
‘ಸ್ಫೋಟ ಸಂಭವಿಸಿರುವ ರಸ್ತೆ ಸದಾ ದಟ್ಟಣೆಯಿಂದ ಕೂಡಿರುತ್ತದೆ. ಉಗ್ರರು ಇದರ ಲಾಭ ಪಡೆಯಲು ಬೈಕ್‌ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದಾರೆ’ ಎಂದು ಬಲೂಚಿಸ್ತಾನದ ಗೃಹ ಸಚಿವ ಸರ್ಫ್‌ರಾಜ್ ಬುಗ್ತಿ ಹೇಳಿದ್ದಾರೆ.
‘ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳನ್ನು ಹಾಳು ಮಾಡಲು ಈ ಕೃತ್ಯ ಎಸಗಲಾಗಿದೆ. ಇದರಿಂದ ನಮ್ಮ ನೈತಿಕ ಶಕ್ತಿ ಕುಗ್ಗುವುದಿಲ್ಲ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ’ ಎಂದು ಅವರು ಹೇಳಿದ್ದಾರೆ.
ಸೋಮವಾರ (ಆಗಸ್ಟ್ 8) ಕ್ವೆಟ್ಟಾದ ಆಸ್ಪತ್ರೆಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 75 ಮಂದಿ ಮೃತಪಟ್ಟು, 115 ಮಂದಿ ಗಾಯಗೊಂಡಿದ್ದರು.
Comments are closed.