ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರ ಕ್ವೆಟ್ಟಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲಿದೆ ಎಂದು ಪಾಕ್ ಅಧ್ಯಕ್ಷ ಮಮ್ನೂನ್ ಹುಸೇನ್ ಹೇಳಿದ್ದಾರೆ.
ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡಿರುವ ಪಾಕ್ ಅಧ್ಯಕ್ಷ ಮಮ್ನೂನ್ ಹುಸೇ,ನ್ ಕ್ವೆಟ್ಟಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ನಮಗೆ ಆಘಾತವಾಗಿದೆ, ನಾವು ದಾಳಿಗೆ ಗುರಿಯಾದ ಕುಟುಂಬಗಳೊಂದಿಗಿದ್ದೇವೆ ಎಂದು ಹೇಳಿದ್ದಾರೆ.
ಆಗಸ್ಟ್ 8 ರಂದು ಸಂಭವಿಸಿದ್ದ ಆತ್ಮಾಹುತಿ ದಾಳಿಯಲ್ಲಿ 74 ಜನರು ಸಾವನ್ನಪ್ಪಿದ್ದರು. ಈ ಘಟನೆ ಬಗ್ಗೆ ಪ್ರತಿಯೊಬ್ಬ ಪಾಕಿಸ್ತಾನಿಗೂ ನೋವಿದೆ. ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರ ಸೇಡು ತೀರಿಸಿಕೊಳ್ಳಲಿದೆ ಎಂದು ಹುಸೇನ್ ತಿಳಿಸಿದ್ದಾರೆ.
Comments are closed.