
ವಿಶ್ವಸಂಸ್ಥೆ : ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರವಾಗಿದ್ದು, ಯುದ್ಧಾಪರಾಧಗಳನ್ನು ನಡೆಸುತ್ತಿದೆ ಎಂದು ಭಾರತ ಗುರುವಾರ ವಿಶ್ವಸಂಸ್ಥೆಗೆ ತಿಳಿಸಿದೆ.
ಪಾಕಿಸ್ತಾನ ಅಪರಾಧ ಕೃತ್ಯ ಎಸಗುವುದನ್ನೇ ತನ್ನ ರಾಷ್ಟ್ರೀಯ ನೀತಿಯಾಗಿಸಿಕೊಂಡಿದೆ ಎಂದು ವಿಶ್ವಸಂಸ್ಥೆಯಲ್ಲಿ ಮೊದಲ ಖಾಯಂ ಕಾರ್ಯದರ್ಶಿಯಾಗಿರುವ ಏನಮ್ ಗಂಭೀರ್ ಅವರು ಕಟುವಾಗಿ ಟೀಕಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಅಂತರರಾಷ್ಟ್ರೀಯ ಹಣಕಾಸು ನಿಧಿಯನ್ನು ಬಳಸಿಕೊಂಡು ಉಗ್ರರಿಗೆ ಹಣಕಾಸು ನೆರವು ಮತ್ತು ತರಬೇತಿ ನೀಡುವ ಮೂಲಕ ನೆರೆಯ ದೇಶಗಳಲ್ಲಿ ಶಾಂತಿಯನ್ನು ಕದಡುವ ಕೆಲಸ ಮಾಡುತ್ತಿದೆ ಎಂದು ಗಂಭೀರ್ ವಿಶ್ವಸಂಸ್ಥೆಗೆ ತಿಳಿಸಿದರು.
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಪ್ ಅವರು ಬುಧವಾರ ವಿಶ್ವಸಮುದಾಯದ ನಾಯಕರನ್ನು ಭೇಟಿ ಮಾಡಿ ಕಾಶ್ಮೀರ ವಿವಾದವನ್ನು ಬಗೆಹರಿಸಲು ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿರುವ ಬೆನ್ನಲೇ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
Comments are closed.