ಅಂತರಾಷ್ಟ್ರೀಯ

ನಮಗೆ ಯುದ್ಧ ಬೇಡ: ಪಾಕ್ ಪ್ರಧಾನಿ

Pinterest LinkedIn Tumblr

NAVAZ-SHAREEFಇಸ್ಲಾಮಾಬಾದ್: ಭಾರತ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸೀಮಿತ ದಾಳಿ ನಡೆಸಿದ ಬಗ್ಗೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಭಾರತದೊಂದಿಗೆ ಯುದ್ಧವನ್ನು ಬಯಸುತ್ತಿಲ್ಲ ಎಂದು ಹೇಳಿದ್ದಾರೆ.
ಭಾರತೀಯ ಸೇನಾ ದಾಳಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನವಾಜ್ ಷರೀಫ್ ಪಾಕಿಸ್ತಾನದ ಸೇನಾ ಸಿದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಪಾಕಿಸ್ತಾನ ಭಾರತದೊಂದಿಗೆ ಯುದ್ಧ ಮಾಡಲು ಬಯಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಒಂದು ವೇಳೆ ಭಾರತವೇನಾದರೂ ಯುದ್ಧ ಘೋಷಿಸಿದರೆ ನಾವು ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ನವಾಜ್ ಷರೀಫ್ ಎಚ್ಚರಿಸಿದ್ದಾರೆ.
ಪಾಕ್ ಆಕ್ರಮಿತ ಪ್ರದೇಶದಲ್ಲಿ ಸೀಮಿತ ದಾಳಿ ನಡೆದ ಬಳಿಕ ಪಾಕಿಸ್ತಾನದ ಜೊತೆಗೆ ಗಡಿ ಹಂಚಿಕೊಂಡಿರುವ ರಾಜಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಡ್ರೋನ್ ಗಳು ಹಾರಾಡುತ್ತಿರುವುದು ಕಂಡು ಬಂದಿದೆ. ಪಾಕಿಸ್ತಾನದಿಂದ ಪ್ರತಿ ದಾಳಿ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಸಹ ಗಡಿ ಪ್ರದೇಶಗಳಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಇನ್ನು ಭಾರತ ಪಾಕಿಸ್ತಾನದ ಮೇಲೆ ಪ್ರತಿ ಸೀಮಿತ ದಾಳಿ ನಡೆಸಿರುವುದಕ್ಕೆ ಬಾಂಗ್ಲಾ ದೇಶ ಭಾರತಕ್ಕೆ ಬೆಂಬಲ ನೀಡಿರುವ ಬೆನ್ನಲ್ಲೇ ಅಫ್ಘಾನಿಸ್ತಾನ ಭಾರತದ ಬೆನ್ನಿಗೆ ನಿಂತಿದ್ದು, ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಭಾರತಕ್ಕಿದೆ ಎಂದು ಹೇಳಿದೆ.

Comments are closed.