ಅಂತರಾಷ್ಟ್ರೀಯ

ಪಾಕಿಸ್ತಾನದ ಬಲೂಚಿಸ್ತಾನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಸಾವಿನ ಸಂಖ್ಯೆ 62ಕ್ಕೆ ಏರಿಕೆ

Pinterest LinkedIn Tumblr

baluchistan

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪ್ರಸಿದ್ಧ ಯಾತ್ರಾ ಸ್ಥಳದಲ್ಲಿ ಶನಿವಾರ ನಡೆದ ಬಾಂಬ್ ಸ್ಫೋಟದಲ್ಲಿ ಸತ್ತವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. 100ಕ್ಕೂ ಹೆಚ್ಚು ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಶುಕ್ರವಾರ ಹಿನ್ನೆಲೆಯಲ್ಲಿ ನೂರಾನಿ ಯಾತ್ರಾಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದರು. ಯಾತ್ರಿಗಳನ್ನು ಗುರಿಯಾಸಿಕೊಂಡಿದ್ದ ಉಗ್ರರು ಈ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ತಮ್ಮ ಕ್ರೂರ ವರ್ತನೆಯನ್ನು ಪ್ರದರ್ಶಿಸಿದ್ದಾರೆ.

ಯಾತ್ರಿಗಳು ಸಾಂಪ್ರಾದಾಯಿಕ ನೃತ್ಯ ಮಾಡುವುದರಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಬಾಂಬ್ ದಾಳಿ ನಡೆಸಲಾಗಿದೆ. ಉಗ್ರರು ಆತ್ಮಾಹುತಿ ದಾಳಿ ಮಾಡಿದ್ದರೇ ಅಥವಾ ಬಾಂಬ್ ನ್ನು ಇಟ್ಟು ಸ್ಫೋಟಿಸಿದ್ದಾರೆಯೇ ಎಂಬುದು ಈ ವರೆಗೂ ಸ್ಪಷ್ಟವಾಗಿಲ್ಲ ಎಂದು ಉಪ ಪೊಲೀಸ್ ಅಧೀಕ್ಷಕ ಜಿಯಾ ಮಂಡೋಖೇಲ್ ಅವರು ಹೇಳಿದ್ದಾರೆ.

ಬಾಂಬ್ ದಾಳಿಯಿಂದಾಗಿ ನೂರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಇಸಿಸ್ ಉಗ್ರ ಸಂಘಟನೆ ದಾಳಿ ಹೊಣೆಯನ್ನು ಹೊತ್ತುಕೊಂಡಿದೆ ಎಂದು ತಿಳಿದುಬಂದಿದೆ.

Comments are closed.