ಅಂತರಾಷ್ಟ್ರೀಯ

ಪಾಕಿಸ್ತಾನವನ್ನು ಕೊಂಡಾಡಿದ ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Pinterest LinkedIn Tumblr

donald-trump

ವಾಷಿಂಗ್ ಟನ್: ಡೊನಾಲ್ಡ್ ಟ್ರಂಪ್ ಅಮೆರಿಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿದೇಶಾಂಗ ನೀತಿಗಳ ಧೋರಣೆಗಳಲ್ಲಿ ಕೆಲವು ಬದಲಾವಣೆಗಳಾದಂತೆ ಕಂಡುಬಂದಿದೆ.

ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಒಳ್ಳೆಯ ಹೆಸರನ್ನು ಹೊಂದಿದ್ದಾರೆ ಎಂದು ಹೇಳಿರುವುದಾಗಿ ಪಾಕಿಸ್ತಾನ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

“ಅಮೆರಿಕದ ನಿಯೋಜಿತ ಅಧ್ಯಕ್ಷರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಕರೆ ಮಾಡಿ ಮಾತನಾಡಿದ್ದು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್ ನವಾಜ್ ಷರೀಫ್ ಅವರನ್ನು ಅದ್ಭುತ ವ್ಯಕ್ತಿ ಎಂದು ಹೊಗಳಿದ್ದು, ನಿಮ್ಮೊಂದಿಗೆ ಮಾತನಾಡುತ್ತಿರುವುದು ಹಳೆಯ ಪರಿಚಯದ ವ್ಯಕ್ತಿಯೊಂದಿಗೆ ಮಾತನಾಡುವಂತೆ ಭಾಸವಾಗುತ್ತಿದೆ ಎಂದು ಟ್ರಂಪ್ ನವಾಜ್ ಷರೀಫ್ ಗೆ ಹೇಳಿದ್ದಾಗಿ ಪಾಕಿಸ್ತಾನದ ಪಿಐಬಿ ತಿಳಿಸಿದೆ.

ಪಾಕಿಸ್ತಾನದ ಜನತೆಯನ್ನು ಅಸಾಮಾನ್ಯ ಬುದ್ಧಿವಂತರೆಂದು ಬಣ್ಣಿಸಿರುವ ಡೊನಾಲ್ಡ್ ಟ್ರಂಪ್, ಪಾಕಿಸ್ತಾನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನೀವು ಅಪೇಕ್ಷಿಸುತ್ತಿರುವ ಪಾತ್ರವನ್ನು ನಿರ್ವಹಿಸಲಿದ್ದೇನೆ ಎಂದು ಟ್ರಂಪ್ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಭಾರತ-ಪಾಕಿಸ್ತಾನ ನಡುವಿನ ಸಮಸ್ಯೆಗಳನ್ನು ಬಗೆಹರಿಸುವುದಾಗಿಯೂ ಭರವಸೆ ನೀಡಿರುವ ಟ್ರಂಪ್ ಜ.20 ರೊಳಗೆ ಯಾವಾಗ ಬೇಕಾದರೂ ಕರೆ ಮಾಡುವಂತೆ ಪಾಕಿಸ್ತಾನ ಪ್ರಧಾನಿಗೆ ಹೇಳಿದ್ದಾರೆ.

ಮಾತುಕತೆ ವೇಳೆ ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ನೀಡಿರುವ ಆಹ್ವಾನವನ್ನು ಪರಿಗಣಿಸಿರುವ ಡೊನಾಲ್ಡ್ ಟ್ರಂಪ್, ಅದ್ಭುತವಾದ ರಾಷ್ಟ್ರ, ಅದ್ಭುತವಾದ ಪ್ರದೇಶವಾದ ಪಾಕಿಸ್ತಾನಕ್ಕೆ ಭೇಟಿ ನೀಡುವ ಇಚ್ಛೆ ಹೊಂದಿರುವುದಾಗಿ ತಿಳಿಸಿದ್ದಾರೆ.

Comments are closed.