ಅಂತರಾಷ್ಟ್ರೀಯ

ಅಫ್ಘಾನಿಸ್ತಾನ: ಅಂತ್ಯಕ್ರಿಯೆಗೆ ತೆರಳುತ್ತಿದ್ದವರ ಮೇಲೆ ಉಗ್ರರ ದಾಳಿ: 15 ಬಲಿ

Pinterest LinkedIn Tumblr


ಜಲಾಲಾಬಾದ್‌: ಪೂರ್ವ ಅಫ್ಘಾನಿಸ್ತಾನದ ನಂಗರ್‌ಹಾರ್‌ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಆತ್ಮಹತ್ಯಾ ಬಾಂಬರ್‌ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟು 14 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ವ್ಯಕ್ತಿಯೊಬ್ಬನ ಅಂತ್ಯಕ್ರಿಯೆಗೆ ತೆರಳುತ್ತಿದ್ದವರ ಗುಂಪಿನ ಮೇಲೆ ಈ ದಾಳಿ ನಡೆದಿದೆ ಎಂದು ನಂಗರ್‌ಹಾರ್‌ ಪ್ರಾಂತ್ಯದ ಗವರ್ನರ್‌ ಅವರ ವಕ್ತಾರ ಅತ್ತುಲ್ಲಾ ಖೋಗ್ಯಾನಿ ಎಎಫ್‌ಪಿ ಸುದ್ದಿಸಂಸ್ಥೆಗೆ ಈ ವಿಷಯ ತಿಳಿಸಿದ್ದಾರೆ.

ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಗುರುವಾರವಷ್ಟೇ ಕಾಬೂಲ್‌ನ ಶಿಯಾ ಸಾಂಸ್ಕೃತಿಕ ಕೇಂದ್ರದ ಮೇಲೆ ಉಗ್ರರು ಆತ್ಮಹತ್ಯಾ ದಾಳಿ ನಡೆಸಿ ಕನಿಷ್ಠ 41 ಮಂದಿಯನ್ನು ಹತ್ಯೆ ಮಾಡಿದ್ದರು. ಆ ಘಟನೆಯಲ್ಲಿ 80ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಆ ದಾಳಿಯ ಹೊಣೆಯನ್ನು ಐಸಿಸ್‌ ಹೊತ್ತುಕೊಂಡಿತ್ತು.

Comments are closed.