ಅಂತರಾಷ್ಟ್ರೀಯ

ರಷ್ಯಾ ವಿಮಾನ ಪತನ: 70ಕ್ಕೂ ಹೆಚ್ಚು ಜನ ಸಾವು?

Pinterest LinkedIn Tumblr


ಮಾಸ್ಕೋ: ರಷ್ಯಾದಲ್ಲಿ ವಿಮಾನವೊಂದು ಪತನಗೊಂಡ ಪರಿಣಾಮ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸರಟೋವ್‌ ಏರ್‌ಲೈನ್ಸ್‌ ವಿಮಾನ ಮಾಸ್ಕೋದಿಂದ ಹಾರಾಟ ಆರಂಭಿಸುತ್ತಿದ್ದಂತೆ ರಾಡಾರ್ ಸಂಪರ್ಕ ಕಳೆದುಕೊಂಡಿತು ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಡೊಮೊಡೆಡೊವೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಪ್ರಯಾಣ ಆರಂಭಿಸಿತು ಎಂದು ಅವರು ತಿಳಿಸಿದ್ದಾರೆ.

ವಿಮಾನದಲ್ಲಿ 65 ಪ್ರಯಾಣಿಕರು ಹಾಗೂ 6 ಸಿಬ್ಬಂದಿ ಇದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ನಂತರ ಮಾಹಿತಿ ನೀಡಿದ ವಿಮಾನ ನಿಲ್ದಾಣ ಅಧಿಕಾರಿಗಳು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇವೆ ಎಂದರು.

Comments are closed.