ಅಂತರಾಷ್ಟ್ರೀಯ

ನೇಪಾಳ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನ ಪತನ; 50ಕ್ಕೂ ಹೆಚ್ಚು ಜನರ ಸಾವಿನ ಶಂಕೆ

Pinterest LinkedIn Tumblr

ಕಾಠ್ಮಂಡು: ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳದ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತಕ್ಕೀಡಾಗಿದೆ. ಸುಮಾರು 50 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.

ಬಾಂಗ್ಲಾದೇಶದ ಢಾಕದಿಂದ ಬಂದ ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

‘ಮೃತಪಟ್ಟವರ ಸಂಖ್ಯೆ ಎಷ್ಟೆಂದು ಈಗಲೇ ಹೇಳಲಾಗದು. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದೇ ನಮ್ಮ ಆದ್ಯತೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ’ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ವಿಮಾನದಲ್ಲಿ 67 ಪ್ರಯಾಣಿಕರಿದ್ದರು.

Comments are closed.