ಅಂತರಾಷ್ಟ್ರೀಯ

ಕೆನಡಾದ ಭಾರತೀಯ ಹೋಟೆಲ್’ನಲ್ಲಿ ಇಬ್ಬರು ಇಬ್ಬರು ಶಸ್ತ್ರಾಸ್ತ್ರಧಾರಿಗಳಿಂದ ಬಾಂಬ್ ಸ್ಫೋಟ; 15 ಜನರಿಗೆ ಗಾಯ

Pinterest LinkedIn Tumblr

ಟೊರೊಂಟೊ: ಕೆನಾಡಾದ ಮಿಸ್ಸಿಗುವಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ವೊಂದಕ್ಕೆ ನುಗ್ಗಿರುವ ಶಸ್ತ್ರಾಸ್ತ್ರಧಾರಿಗಳು ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟಗೊಳಿಸಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಬಾಂಬ್ ಬೇಲ್ ರೆಸ್ಟೋರೆಂಟ್ ಮೇಲೆ ಕಳೆದ ರಾತ್ರಿ 10.30ರ ಸುಮಾರಿಗೆ ನುಗ್ಗಿರುವ ಇಬ್ಬರು ಶಸ್ತ್ರಾಸ್ತ್ರಧಾರಿಗಳು ಬಾಂಬ್ ಸ್ಫೋಟಿಸಿದ್ದಾರೆಂದು ವರದಿಗಳು ತಿಳಿಸಿವೆ.

ಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ಘಟನೆಯಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಹೋಟೆಲ್’ನ ಗಾಜುಗಳು ಪುಡಿಪುಡಿಯಾಗಿರುವ ದೃಶ್ಯಗಳು ಕಂಡುಬಂದಿದ್ದು, ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

Comments are closed.