ಅಂತರಾಷ್ಟ್ರೀಯ

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್‍ಗೆ ಪಾಕಿಸ್ತಾನ ಹೇಳಿದ್ದೇನು?

Pinterest LinkedIn Tumblr

ಇಸ್ಲಾಮಾಬಾದ್: ಭಾರತೀಯ ವಾಯುಸೇನೆಯ ಬಲಿಷ್ಠ ಯುದ್ಧ ವಿಮಾ ಮಿರಾಜ್-2000 ನಡೆಸಿದ ಏರ್ ಸ್ಟ್ರೈಕ್ ಗೆ ಪಾಕಿಸ್ತಾನ ನಡುಗಿ ಹೋಗಿದೆ.

ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ 3.30ರ ಸುಮಾರಿಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ. ಇನ್ನು ಈ ಬಗ್ಗೆ ಸ್ವತಃ ಪಾಕಿಸ್ತಾನ ಒಪ್ಪಿಕೊಂಡಿದ್ದು ಕಳೆದ ರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಗಡಿ ನಿಯಂತ್ರಣ ರೇಖೆ ದಾಟಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿತ್ತು. ಈ ವೇಳೆ ನಾವು ಎಚ್ಚೇತ್ತು ತಕ್ಷಣೆ ಕಾರ್ಯಾಚರಣೆ ಕೈಗೊಂಡೆವು ಇದರಿಂದ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಖಾಲಿ ಕೈಯಲ್ಲಿ ವಾಪಸಾಗಿದೆ ಎಂದು ಪಾಕಿಸ್ತಾನ ಹೇಳುತ್ತಿದೆ.

ಇದರಿಂದ ಕಳೆದ ರಾತ್ರಿ ಭಾರತೀಯ ವಾಯುಪಡೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏರ್ ಸ್ಟ್ರೈಕ್ ಮಾಡಿರುವುದು ಸತ್ಯ ಎಂಬಂತಾಗಿದೆ.

ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದೆ.

Comments are closed.