ಅಂತರಾಷ್ಟ್ರೀಯ

ಭಾರತ – ಪಾಕ್’ನಿಂದ ಶೀಘ್ರವೇ ಶುಭ ಸುದ್ದಿ ಸಿಗಲಿದೆ:ಡೊನಾಲ್ಡ್ ಟ್ರಂಪ್

Pinterest LinkedIn Tumblr

ಹನಾಯ್: ಭಾರತ – ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಉಭಯ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಮಧ್ಯವರ್ತಿಯಾಗಲು ಮುಂದಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಸಿಹಿ ಸುದ್ದಿಯೊಂದನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

ವಿಯೇಟ್ನಾಂ ಪ್ರವಾಸದಲ್ಲಿರುವ ಟ್ರಂಪ್ ಇಂದು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭಾರತ – ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಪ್ರಸ್ತಾಪಿಸಿದ ಅಮೆರಿಕದ ಅಧ್ಯಕ್ಷ, ಎರಡು ರಾಷ್ಟ್ರಗಳೊಂದಿಗೆ ಶಾಂತಿ ಕಾಪಾಡಲು ನಾವು ಮಧ್ಯವರ್ತಿಯಾಗಿ ಕೆಲಸ ಮಾಡುತ್ತೇವೆ. ಶೀಘ್ರವೇ ಶುಭ ಸುದ್ದಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಹಾಗೂ ಪಾಕಿಸ್ತಾನದ ಜೊತೆ ನಾವು ತುಂಬಾ ಆತ್ಮೀಯತೆಯಿಂದಲೇ ಮಾತುಕತೆ ನಡೆಸುತ್ತಿದ್ದೇವೆ. ಸದ್ಯದಲ್ಲೇ ಎರಡೂ ದೇಶಗಳೂ ಒಂದು ಸಿಹಿ ಸುದ್ದಿ ನಿಡಲಿವೆ. ಆ ಮೂಲಕ ದಶಕಗಳಿಂದ ಎರಡು ದೇಶಗಳ ನಡುವೆ ಇರುವ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಭಾರತ, ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಭಾರತದ ಬೆಂಬಲಕ್ಕೆ ನಿಂತಿದ್ದ ಅಮೆರಿಕ, ಭಾರತ ಭಯೋತ್ಪಾದನೆ ವಿರುದ್ಧ ನಡೆಸಿದ ದಾಳಿಗೆ ಪ್ರತಿಕಾರವಾಗಿ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು. ಈಗಲಾದರೂ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಿ. ಇಲ್ಲವಾದರೆ ಹೆಚ್ಚಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

Comments are closed.