ಅಂತರಾಷ್ಟ್ರೀಯ

ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಿ, ನಾನು ಆ ಪ್ರಶಸ್ತಿಗೆ ಅರ್ಹನಲ್ಲ:ಇಮ್ರಾನ್ ಖಾನ್

Pinterest LinkedIn Tumblr

ಇಸ್ಲಾಮಾಬಾದ್: ಕಾಶ್ಮೀರಿಗಳ ಭಾವನೆಗೆ ತಕ್ಕಂತೆ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ವಾಯುದಾಳಿ ವೇಳೆ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪಾಕ್ ಸೈನಿಕರ ವಶದಲ್ಲಿದ್ದ ಐಎಎಫ್ ಪೈಲಟ್ ಅಭಿನಂದನ್ ರನ್ನು ಬಿಡುಗಡೆ ಮಾಡುವ ಮೂಲಕ ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಪಾಕಿಸ್ತಾನ ಪ್ರಧಾನಿ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಸಂಸತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.

ಈ ವಿಚಾರ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು, ನಾನು ಆ ಪ್ರಶಸ್ತಿಗೆ ಅರ್ಹನಲ್ಲ… ಕಾಶ್ಮೀರ ಸಮಸ್ಯೆಯನ್ನು ಕಾಶ್ಮೀರಿಗಳ ಭಾವನೆದೆ ತಕ್ಕಂತೆ ಶಾಂತಿಯುತವಾಗಿ ಪರಿಹರಿಸುವ ವ್ಯಕ್ತಿಗೆ ನೀಡಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಶಾಂತಿಯುತವಾಗಿ ಮತ್ತು ಕಾಶ್ಮೀರಿಗಳ ಭಾವನೆಗೆ ಪೂರಕವಾಗಿ ಕಾಶ್ಮೀರ ಸಮಸ್ಯೆ ಬಗೆಹರಿಸುವ ವ್ಯಕ್ತಿಗೆ ನೊಬೆಲ್ ಶಾಂತಿ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

Comments are closed.