ಅಂತರಾಷ್ಟ್ರೀಯ

ಅಮೆರಿಕ: ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿ; ಓರ್ವ ಭಾರತೀಯ ಪ್ರಜೆ, ಮೂವರು ಭಾರತ ಮೂಲದ ಅಮೆರಿಕ ಪ್ರಜೆಗಳು ಸಾವು!

Pinterest LinkedIn Tumblr

ವಾಷಿಂಗ್ಟನ್: ಅಮೆರಿಕದಲ್ಲಿ ಗನ್ ಸಂಸ್ಕೃತಿ ಅಟ್ಟಹಾಸ ಮೆರೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ, ಮೂವರು ಭಾರತೀಯ ಮೂಲದವರು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದ ಸಿನ್ಸಿನಾಟಿಯಲ್ಲಿರುವ ನಾರ್ಥ್ ಕ್ಯಾರೋಲಿನಾ ವಿವಿಯ ಕ್ಯಾಂಪಸ್ ನಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ, ಹಾಗೂ ಭಾರತ ಮೂಲದ ಅಮೆರಿಕ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಘಟನೆಯಲ್ಲಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಗುಂಡಿನ ದಾಳಿ ನಡೆಸಿದ ಶಸ್ತ್ರಧಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ವಿವಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ಗುಂಡಿನ ದಾಳಿ ಬಳಿಕ ವಿವಿಯ ಕಾರ್ಯಚಟುವಟಿಕೆಗಳು ಸ್ಥಬ್ಧವಾಗಿದ್ದು, ತರಗತಿಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಅಮೆರಿಕದಲ್ಲಿ ನಡೆದ ಗುಂಡಿನ ದಾಳಿ ಧ್ವೇಷದ ದಾಳಿಯಲ್ಲ. ಪ್ರಕರಣದ ಕುರಿತು ಪೊಲೀಸರು ಮತ್ತು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ ಸಂತ್ರಸ್ಥ ಭಾರತೀಯರ ನೆರವಿಗೆ ರಾಯಭಾರ ಕಚೇರಿಯ ಅಧಿಕಾರಿಗಳು ಇದ್ದು, ಸಂತ್ರಸ್ಥರೊಂದಿಗೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Comments are closed.