ಅಂತರಾಷ್ಟ್ರೀಯ

ಮೋದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೂರವಾಣಿ ಕರೆ; ಹೇಳಿದ್ದೇನು….?

Pinterest LinkedIn Tumblr

ಇಸ್ಲಾಮಾಬಾದ್: ಎರಡನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಮೋದಿಯೊಂದಿಗೆ ಮಾತುಕತೆ ನಡೆಸಿರುವ ಇಮ್ರಾನ್ ಖಾನ್, ಉಭಯ ರಾಷ್ಟ್ರಗಳ ಜನತೆಯ ಒಳಿತಿಗಾಗಿ ಒಟ್ಟಿಗೆ ಕೆಲಸ ಮಾಡುವ ಇಂಗಿತವನ್ನು ಖಾನ್ ಈ ವೇಳೆ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಚುನಾವಣೆ ಫಲಿತಾಂಶ ಬಂದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್ ಮೋದಿಗೆ ಅಭಿನಂದನೆ ಸಲ್ಲಿಸಿದ್ದರು.

Comments are closed.