ಅಂತರಾಷ್ಟ್ರೀಯ

ಬೋಯಿಂಗ್ 777 ವಿಮಾನದ ರೆಕ್ಕೆಗಳಲ್ಲಿ ಬೆಂಕಿ : 342 ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರು.

Pinterest LinkedIn Tumblr

ಲಾಸ್ ಏಂಜಲೀಸ್ : ಅಮೆರಿಕದ ಲಾಸ್ ಏಂಜಲೀಸ್ ನಿಂದ ಹೊರಟ ಬೋಯಿಂಗ್ 777 ವಿಮಾನಕ್ಕೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಮಾನದ ರೆಕ್ಕೆಗಳಲ್ಲಿ ಬೆಂಕಿ ಕಾಣಿಸಿಕೊಂಡ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇಂಜಿನ್ ನಲ್ಲಿನ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಪೈಲಟ್ ವಿಮಾನವನ್ನು ತುರ್ತಾಗಿ ಲ್ಯಾಂಡ್ ಮಾಡಿಸಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ 342 ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದು, ವಿಮಾನದ 18 ಸಿಬ್ಬಂದಿಗಳೂ ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.