ಅಂತರಾಷ್ಟ್ರೀಯ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್‍ಗೆ ಗಲ್ಲುಶಿಕ್ಷೆ !

Pinterest LinkedIn Tumblr

ಪೇಶಾವರ್; ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಫರ್ವೇಜ್ ಮುಷರಫ್ ಅವರಿಗೆ ಅಲ್ಲಿನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಧಿಕಾರಾವಧಿಯಲ್ಲಿ ಮುಷರಫ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು. 2007ರ ನವೆಂಬರ್ ನಲ್ಲಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ದೇಶದಲ್ಲಿ ಅನಗತ್ಯ ಮತ್ತು ಬಲವಂತ, ದುರುದ್ದೇಶಪೂರಿತ ಆಂತರಿಕ ತುರ್ತು ಪರಿಸ್ಥಿತಿ ಹೇರಿದ್ದರು. 2013ರವರೆಗೂ ಈ ಪ್ರಕರಣದ ವಿಚಾರಣೆ ನೆನೆಗುದಿಗೆ ಬಿದ್ದಿತ್ತು. ನವಾಜ್ ಷರೀಫ್ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಈ ಪ್ರಕರಣದ ವಿಚಾರಣೆಗೆ ಆದೇಶ ನೀಡಿದ್ದರು. ಬಳಿಕ ಮುಷರಫ್ ಲಂಡನ್ ಗೆ ಪಲಾಯನ ಗೈದಿದ್ದರು.

ದೇಶದ್ರೋಹ ಪ್ರಕರಣದಂತಹ ಗಂಭೀರ ಆರೋಪ ಎದುರಿಸುತ್ತಿದ್ದ ಫರ್ವೇಜ್ ಮುಷರಫ್​ ಕಳೆದ ನಾಲ್ಕು ವರ್ಷದ ಹಿಂದೆ ಲಂಡನ್​ ಗೆ ಪಲಾಯನ ಗೈದಿದ್ದರು. ಆದರೆ, ಕಳೆದ ಚುನಾವಣೆ ವೇಳೆಗೆ ಮತ್ತೆ ಪಾಕಿಸ್ತಾನಕ್ಕೆ ಆಗಮಿಸಿದ್ದ ಮುಷರಫ್ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮುಷರಫ್ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಪಾಕಿಸ್ತಾನ ಸೇನೆಯ ಸೇನಾಧಿಕಾರಿಯಾಗಿದ್ದ ಮುಷರಫ್​ 1999 ರಿಂದ 2008ರ ವರೆಗೆ ಪಾಕಿಸ್ತಾನದ ಸರ್ವಾಧಿಕಾರಿ ಅಧಿಕಾರ ನಡೆಸಿದ್ದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಕಾರ್ಗಿಲ್ ಯುದ್ಧ ಇವರ ಕಾಲದಲ್ಲೇ ನಡೆದಿತ್ತು ಎಂಬುದನ್ನು ಗಮನಿಸಬಹುದು.

Comments are closed.