ಅಂತರಾಷ್ಟ್ರೀಯ

ಕೊರೊನಾ ವೈರಸ್: ನ್ಯೂಯಾರ್ಕ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ!

Pinterest LinkedIn Tumblr


ನ್ಯೂಯಾರ್ಕ್: ಇಡೀ ವಿಶ್ವವನ್ನೇ ಆಪೋಷಣ ಪಡೆಯುತ್ತಿರುವ ಕೊರೊನಾ ವೈರಸ್, ಅಮೆರಿಕಕ್ಕೂ ಲಗ್ಗೆ ಇಟ್ಟಿದೆ. ಮಾರಕ ಕೊರೊನಾಗೆ ಅಮೆರಿಕದಲ್ಲಿ ಇದುವರೆಗೂ 19 ಜನ ಬಲಿಯಾಗಿದ್ದಾರೆ.

ಅಮೆರಿಕದಲ್ಲಿ ಕೊರೊನಾ ವೈರಸ್ ಪೀಡಿತರ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಮಾರಕ ವೈರಸ್‌ಗೆ ಅಮೆರಿಕದಲ್ಲಿ ಇದುವರೆಗೂ 19 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ನ್ಯೂಯಾರ್ಕ್ ಆಡಳಿತ, ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಮನವಿ ಮಾಡಿದೆ.

ಅದರಂತೆ ಮಾರಕ ವೈರಸ್ ವಿರುದ್ಧ ಹೋರಾಡಲು ನ್ಯೂಯಾರ್ಕ್ ಸಜ್ಜಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕೊರೊನಾ ವೈರಸ್‌ನಿಂದ ನ್ಯೂಯಾರ್ಕ್ ನಗರವನ್ನು ದೂರ ಇಡಲು ಸಜ್ಜಾಗಿರುವುದಾಗಿ ಸ್ಥಳೀಯ ಆಡಳಿತ ಭರವಸೆ ನೀಡಿದೆ.

Comments are closed.