
ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್-19 ಸಾವಿನ ಸಂಖ್ಯೆ ಮತ್ತು ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ‘ಯುಎಸ್ ಅತ್ಯಂತ ಕಠಿಣ ವಾರಗಳತ್ತ ಹೆಜ್ಜೆ ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಈ ವಾರ ಮತ್ತು ಮುಂದಿನ ವಾರಗಳಲ್ಲಿ ಸಾಕಷ್ಟು ಸಾವು ಸಂಭವಿಸಬಹುದು, ಮಾತ್ರವಲ್ಲದೆ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.
ಅಮೆರಿಕಾದಲ್ಲಿ ಈಗಾಗಲೇ 3 ಲಕ್ಷಕ್ಕಿಂತ ಹೆಚ್ಚು ಜನರು ಈ ಮಾರಕ ವೈರಸ್ ಗೆ ತುತ್ತಾಗಿದ್ದಾರೆ. ಸಾವಿನ ಸಂಖ್ಯೆ ಕೂಡ 8 ಸಾವಿರದ ಗಡಿ ದಾಟಿದೆ. ದುರದೃಷ್ಟವೆಂದರೇ 24 ಗಂಟೆಗಳ ಅವಧಿಯಲ್ಲಿ ಸೋಂಕಿತರ ಸಂಖ್ಯೆ 2ರಿಂದ 3 ಪಟ್ಟು ಹೆಚ್ಚಾಗುತ್ತಿದೆ.
ಅಮೆರಿಕಾದಲ್ಲಿ ಅಗತ್ಯ ವೈದ್ಯಕೀಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಹಲವು ಕಂಪೆನಿಗಳು ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಅಗತ್ಯ ವಸ್ತುಗಳ ಸರಬರಾಜು ನಿಲ್ಲಿಸಿದ್ದರಿಂದಲೇ ಅತೀ ಹೆಚ್ಚು ಜನರು ಮೃತರಾಗುವಂತಾಯಿತು ಎಂದು ಇದೇ ಸಂದರ್ಭದಲ್ಲಿ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments are closed.