
ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ವಿಶ್ವಾದ್ಯಂತ 1 ಲಕ್ಷ ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 11,900ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ 260ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ.
ಎಪ್ರಿಲ್ 15ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:-
-ಭಾರತದಲ್ಲಿ ಸೋಂಕಿತರ ಪ್ರಕರಣಗಳ ಸಂಖ್ಯೆ 11,933ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.
-ಕರ್ನಾಟಕದಲ್ಲಿ ಇಂದು ಒಂದೇ ದಿನ ಹೊಸದಾಗಿ 19 ಪಾಸಿಟಿವ್ ಕೇಸುಗಳು ಬೆಳಕಿಗೆ ಬಂದಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆ 279ಕ್ಕೆ ಏರಿಕೆಯಾಗಿದೆ. 12 ಮಂದಿ ಸಾವನ್ನಪ್ಪಿದ್ದು 80 ಮಂದಿ ಗುಣಮುಖರಾಗಿದ್ದಾರೆ.
-ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 1,076 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
-ಭಾರತದಲ್ಲಿ ಈವರೆಗೆ 11,600 ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದೆ. ದೇಶದಲ್ಲಿ 399 ಮಂದಿ ಸಾವನ್ನಪ್ಪಿದ್ದಾರೆ.
-ವಿಶ್ವದಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 20 ಲಕ್ಷ ದಾಟಿದೆ ಎಂದು ಅಧಿಕೃತ ವರದಿ ತಿಳಿಸಿದೆ. 1 ಲಕ್ಷದ 26 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
-ರಾಜ್ಯದಲ್ಲಿ ಒಂದೇ ದಿನ 17 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಪ್ರಕರಣ ಮೈಸೂರಿನಲ್ಲೇ ಬೆಳಕಿಗೆ ಬಂದಿದ್ದು, ಇವರೆಲ್ಲ ನಂಜನಗೂಡು ಜ್ಯುಬಿಲಿಯಂಟ್ ಪ್ಯಾಕ್ಟರಿಯ ನೌಕರರಾಗಿದ್ದಾರೆ.
Comments are closed.