ಅಂತರಾಷ್ಟ್ರೀಯ

ಕೊರೋನಾ ಆರ್ಭಟ; ಅಮೆರಿಕದಲ್ಲಿ ಒಂದು ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ

Pinterest LinkedIn Tumblr

ವಾಷಿಂಗ್ಟನ್: ಮಹಾಮಾರಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಅಮೆರಿಕದಲ್ಲಿ ಅತಿ ಹೆಚ್ಚು ಸಾವು ನೋವು ಸಂಭವಿಸಿದೆ.

ಇದೀಗ ಬುಧವಾರದಂದು ಅಮೆರಿಕದಲ್ಲಿ ಸಾವಿನ ಸಂಖ್ಯೆ ಒಂದು ಲಕ್ಷ ಗಡಿಯನ್ನು ಗಡಿದೆ.

ನಾಲ್ಕು ತಿಂಗಳೊಳಗೆ ಅಮೆರಿಕದಲ್ಲಿ ಸಾವಿನ ಸಂಖ್ಯೆ ಲಕ್ಷ ದಾಟಿದೆ. ಕೋವಿಡ್ ಸೋಂಕು ಹಾಗೂ ಸಾವಿನ ಸಂಖ್ಯೆ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಜಾನ್ ಹಾಪ್‌ಕಿನ್ಸ್ ವಿಶ್ವ ವಿದ್ಯಾಲಯದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಇದುವರೆಗೆ 16 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗೆಯೇ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ವೈರಸ್‌ಗೆ ಲಸಿಕೆ ಕಂಡು ಹಿಡಿಯಲು ಸಮರೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಹಲವು ಸಂಶೋಧನಾ ಸಂಸ್ಥೆಗಳು ಈಗಾಗಲೇ ಮಾನವರಲ್ಲಿ ಪ್ರಯೋಗವನ್ನು ಆರಂಭಿಸಿದೆ.

ಕೂಡಲೇ ಈ ಎಲ್ಲ ಪ್ರಯತ್ನಗಳಿಗೆ ಧನಾತ್ಮಕ ಫಲಿತಾಂಶ ಸಿಗುವ ನಂಬಿಕೆಯಲ್ಲಿದೆ. ಇನ್ನೊಂದೆಡೆ ಸೋಂಕು ಪ್ರಕರಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅತ್ತ ಬ್ರೆಜಿಲ್‌ನಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, 25 ಸಾವಿರಕ್ಕೂ ಹೆಚ್ಚು ಮಂದಿ ಸಾವಿಗೆ ಶರಣಾಗಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಚೀನಾದಲ್ಲಿ ಕೊರೊನಾ ವೈರಸ್ ಉದ್ಭವಗೊಂಡಿತ್ತು. ಅಲ್ಲಿಂದ ಬಳಿಕ ಕಣ್ಣಿಗೆ ಕಾಣದ ಸೂಕ್ಷ್ಮ ವೈರಸ್ ಇಡೀ ವಿಶ್ವವನ್ನೇ ಆವರಿಸಿದ್ದು, ತಲ್ಲಣಗೊಳಿಸಿದೆ.

Comments are closed.