ಅಂತರಾಷ್ಟ್ರೀಯ

ಪ್ರಧಾನಿ ಮೋದಿ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ ಹೇಳಿದ್ದೇನು….?

Pinterest LinkedIn Tumblr

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಅವರ ಹಠಾತ್ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಗಡಿ ಘರ್ಷಣೆ ಹಾಗೂ ಗಡಿ ತಕರಾರಿನ ಕುರಿತು ಭಾರತದೊಂದಿಗೆ ಶಾಂತಿಯುತ ಮಾತುಕತೆಗಳು ಮುಂದುವರೆದಿವೆ ಎಂದು ಹೇಳಿದೆ.

ಭಾರತ-ಚೀನಾ ನಡುವೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಮೂಲಕ ಉದ್ವಿಗ್ನತೆ ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಸಂದರ್ಭದಲ್ಲಿ ಎರಡೂ ಪಕ್ಷ ಆಕ್ರಮಣಕಾರಿ ವರ್ತನ ತೋರುವುದು ಸಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.

ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಲು ಕಾರಣವಾಗುವ ಯಾವುದೇ ವರ್ತನೆಯನ್ನು ಎರಡೂ ಸೇನಾ ಪಡೆಗಳು ತೋರಬಾರದು ಎಂದು ಜಾವೋ ಲಿಜಿಯಾನ್ ಮನವಿ ಮಾಡಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿ ಮೋದಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆಯವರ ಜೊತೆಗೆ ಲಡಾಖ್ ಗಡಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದರು.

Comments are closed.