ಅಂತರಾಷ್ಟ್ರೀಯ

ಭಾರತ ಕೊಳಕು, ಗಲೀಜು ದೇಶ; ಡೊನಾಲ್ಡ್​ ಟ್ರಂಪ್

Pinterest LinkedIn Tumblr


ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೇವಲ 12 ದಿನಗಳು ಬಾಕಿ ಉಳಿದಿದ್ದು, ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಡೊನಾಲ್ಡ್​ ಟ್ರಂಪ್ ಮತ್ತು ಜೋ ಬಿಡೆನ್ ಭರದಿಂದ ಪ್ರಚಾರ ಕಾರ್ಯ ನಡೆಸಿದ್ದಾರೆ. ಈ ವೇಳೆ ಭಾರತದಲ್ಲಿ ಅತಿ ಕೆಟ್ಟ ಹವಾಮಾನವಿದೆ ಎಂದು ಟ್ರಂಪ್ ಟೀಕಿಸಿದ್ದಾರೆ.

ಇಂದು ಡೊನಾಲ್ಡ್​ ಟ್ರಂಪ್ ಮತ್ತು ಜೋ ಬಿಡೆನ್ ಇಬ್ಬರೂ ತಮ್ಮ ಕೊನೆಯ ಮುಖಾಮುಖಿ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಅಮೆರಿಕದಲ್ಲಿ ನ. 3ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಮೆರಿಕದ ಹವಾಮಾನ ಬದಲಾವಣೆಯ ಬಗ್ಗೆ ಮಾತನಾಡುವಾಗ ಬೇರೆ ದೇಶಗಳ ಜೊತೆ ಹೋಲಿಕೆ ಮಾಡಿರುವ ಡೊನಾಲ್ಡ್​ ಟ್ರಂಪ್, ಚೀನಾ, ರಷ್ಯಾ, ಭಾರತ ದೇಶಗಳನ್ನೇ ಗಮನಿಸಿ. ಆ ದೇಶಗಳ ಗಾಳಿ ಬಹಳ ಕಲುಷಿತವಾಗಿದೆ. ಭಾರತ, ರಷ್ಯಾಗಳ ವಾಯು ಮಾಲಿನ್ಯಕ್ಕೆ ಹೋಲಿಸಿದರೆ ಅಮೆರಿಕದಲ್ಲಿ ಅತಿ ಶುದ್ಧವಾದ ಗಾಳಿಯಿದೆ, ಸ್ವಚ್ಛವಾದ ನೀರಿದೆ ಎಂದು ಹೇಳಿದ್ದಾರೆ.

ಕಪ್ಪು ಜನಾಂಗದವರಿಗೆ ಅಮೆರಿಕದಲ್ಲಿ ಲಿಂಕನ್ ಹೊರತುಪಡಿಸಿ ಬೇರೆ ಯಾವ ಅಧ್ಯಕ್ಷರೂ ಮಾಡದಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಅವರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ್ದೇನೆ ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಜೋ ಬಿಡೆನ್ ಅಮೆರಿಕದ ಇದುವರೆಗಿನ ಎಲ್ಲ ಅಧ್ಯಕ್ಷರಿಗಿಂತಲೂ ಅಬ್ರಾಹಾಂ ಲಿಂಕನ್ ಅತಿ ಹೆಚ್ಚು ವರ್ಣಭೇದವಿದ್ದ ಅಧ್ಯಕ್ಷರಾಗಿದ್ದರು. ಅವರನ್ನು ಟ್ರಂಪ್ ವಿನಾಕಾರಣ ಹೊಗಳುತ್ತಿದ್ದಾರೆ ಎಂದಿದ್ದಾರೆ.

ಇಂದು ನಡೆಯುವ ಮುಖಾಮುಖಿ ಸಂದರ್ಶನದಲ್ಲಿ ಡೊನಾಲ್ಡ್​ ಟ್ರಂಪ್ ಮತ್ತು ಜೋ ಬಿಡೆನ್ ಯಾವ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಮೊದಲ ಮುಖಾಮುಖಿ ಚರ್ಚೆ ವೇಳೆ ಟ್ರಂಪ್ ಅವರು ಜೋ ಬಿಡೆನ್​ಗೆ ಪ್ರತಿಕ್ರಿಯೆ ನೀಡಲು ಕೂಡ ಟ್ರಂಪ್ ಅವಕಾಶ ನೀಡಿರಲಿಲ್ಲ. ಆ ಚರ್ಚೆಯಲ್ಲಿ ಟ್ರಂಪ್ ಒಬ್ಬರೇ ವಿಜೃಂಭಿಸಿದ್ದರು. ಇಂದಿನ ಚರ್ಚೆಯಲ್ಲಿ ಬಿಡೆನ್ ಯಾವ ರೀತಿ ಟ್ರಂಪ್ ವಿರುದ್ಧ ಟೀಕಾಪ್ರಹಾರ ನಡೆಸಲಿದ್ದಾರೆ ಎಂಬುದನ್ನು ನೊಡಬೇಕಿದೆ.

Comments are closed.