ಅಂತರಾಷ್ಟ್ರೀಯ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

Pinterest LinkedIn Tumblr


ಲಾಹೋರ್: ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಜುಲೈ 17ರಂದು ನಡೆದ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಮತ್ತೆ ಎರಡು ಪ್ರಕರಣಗಳಲ್ಲಿ ಕೋರ್ಟ್​ ಹಫೀಜ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ ನೀಡಿದೆ. ಅಲ್ಲದೆ ಹಫೀಜ್​ನ ಮೂವರು ಸಹಚರರಿಗೂ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.

ಹಫೀಜ್​ ಹಾಗೂ ಆತನ ಇಬ್ಬರು ಸಹಚರರಾದ ಜಫರ್​ ಇಕ್ಬಾಲ್​ ಹಾಗೂ ಯಹ್ಯಾ ಮುಜಾಹಿದ್​ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ಹಾಗೂ ಹಫೀಜ್​ ಭಾವ ಅಬ್ದುಲ್​ ರೆಹ್ಮಾನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್​ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 24 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ.

Comments are closed.