ಅಂತರಾಷ್ಟ್ರೀಯ

ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದ ಅಮೆರಿಕ

Pinterest LinkedIn Tumblr

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಸರ್ಕಾರ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ.

ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಸಂಸ್ಥೆಯ ಕೋವಿಡ್‌ ಲಸಿಕೆಯ ಪ್ರಯೋಗಾತ್ಮಕ ವರದಿಯಲ್ಲಿ ಲಸಿಕೆ ಸೋಂಕಿತರ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬ ಮಾಹಿತಿ ಬಂದಿತ್ತು. ಇದರ ಬೆನ್ನಲ್ಲೇ ಅಮೆರಿಕ ಸರ್ಕಾರ ತನ್ನ ದೇಶದಲ್ಲಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅನುಮತಿ ದೊರೆತಿರುವ ಮೂರನೇ ಲಸಿಕೆ ಇದಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಫೈಝರ್‌ ಮತ್ತು ಮಾಡರ್ನಾ ಲಸಿಕೆಗಳಿಗೆ ಅನುಮತಿ ನೀಡಲಾಗಿತ್ತು.

ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಈ ಲಸಿಕೆಯ ಒಂದು ಡೋಸ್‌ ಹಾಕಿಸಿಕೊಂಡರೆ ಸಾಕಾಗುತ್ತದೆ. ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಲಸಿಕೆಯನ್ನು ಸಾಮಾನ್ಯ ಫ್ರಿಡ್ಜ್‌ ಉಷ್ಣಾಂಶದಲ್ಲಿ ಸಂಗ್ರಹಿಸಿ ಇಡಬಹುದಾಗಿದೆ, ಇದರಿಂದಾಗಿ ಸಾಗಣೆ ಮತ್ತು ಸಂಗ್ರಹ ಸರಳವಾಗಲಿದೆ. ಈವರೆಗೂ ಅಮೆರಿಕದಲ್ಲಿ 6.5 ಕೋಟಿ ಜನರು ಫೈಝರ್‌ ಮತ್ತು ಮಾಡರ್ನಾ ಲಸಿಕೆ ಡೋಸ್‌ ಹಾಕಿಸಿಕೊಂಡಿದ್ದಾರೆ. ಆ ಎರಡೂ ಲಸಿಕೆಗಳೂ ಸುಮಾರು ಶೇ 95ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಯಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಎಫ್‌ಡಿಎ, ‘ಹೊಸ ಸ್ವರೂಪದ ಕೊರೊನಾ ವೈರಸ್‌ ಸೇರಿದಂತೆ ಕೋವಿಡ್‌-19 ನಿಯಂತ್ರಣದಲ್ಲಿ ಲಸಿಕೆಯ ಬಳಕೆ ಪರಿಣಾಮಕಾರಿಯಾಗಲಿದೆ ಎಂದು ಹೇಳಿದೆ.

ಇದೇ ವಿಚಾರವಾಗಿ ಪ್ರಕಟಣೆ ಹೊರಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ‘ಎಲ್ಲ ಅಮೆರಿಕನ್ನರಿಗೂ ಇದು ಒಳ್ಳೆಯ ಸುದ್ದಿಯಾಗಿದೆ, ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನದಲ್ಲಿ ಇದು ಪ್ರೋತ್ಸಾಹದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕ್ಲಿನಿಕಲ್‌ ಟ್ರಯಲ್‌ನಲ್ಲಿ ಕೋವಿಡ್‌ ಲಸಿಕೆಯು ಅಮೆರಿಕದಲ್ಲಿ

Comments are closed.