ಕರಾವಳಿ

ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಅರಳಬೇಕು: ಸಚಿವ ಜೈನ್

Pinterest LinkedIn Tumblr

mood-prathibha-karanji

ಮೂಡುಬಿದಿರೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ಮೂಡುಬಿದಿರೆ, ಸೆ.15: ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯ ಇವುಗಳ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಎರಡು ದಿನಗಳ ಕಾಲ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸೋಮವಾರ ಆರಂಭಗೊಂಡಿತು.

ಯುವಜನಸೇವೆ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಪೂರಕ. ಶಿಕ್ಷಣ, ಕ್ರೀಡೆಯ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಅವರಲ್ಲಿರುವ ಪ್ರತಿಭೆೆಗಳನ್ನು ಗುರುತಿಸಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅರಳುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ, ಮಕ್ಕಳು ತಮ್ಮಲ್ಲಿರುವ ಪ್ರತಿಭೆೆಗಳನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸ್ಫೂರ್ತಿಯಾಗಿವೆ. ಹಿಂದೆ ಎಷ್ಟೋ ಮಕ್ಕಳು ಅವಕಾಶ ಸಿಗದೆ ವಂಚಿತರಾಗಿದ್ದಾರೆಂದು ಹೇಳಿದರು. ಮೂಡುಬಿದಿರೆ ಪುರಸಭಾಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ತಾಪಂ ಸದಸ್ಯ ಪ್ರಕಾಶ್ ಪಿ., ಆಳ್ವಾಸ್ ಸಂಸ್ಥೆಯ ಎಲ್.ಜೆ. ಫೆೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಎನ್.ಕೆಂಬಾರೆ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಶುಪತಿ ಶಾಸ್ತ್ರಿ, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ ಮತ್ತು ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಶೀವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕ ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಅಂಡಾರು ಗುಣಪಾಲ ಹೆಗ್ಡೆ ವಂದಿಸಿದರು.

Write A Comment