ಕರಾವಳಿ

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದಿಂದ ಗೌರವದ ಸ್ವಾಗತ

Pinterest LinkedIn Tumblr

Vice_President_Mlore_1

ಮಂಗಳೂರು, ಸೆ.21 : ಭಾರತದ ಉಪರಾಷ್ಟ್ರಪತಿ ಮುಹಮ್ಮದ್ ಹಮೀದ್ ಅನ್ಸಾರಿ ಅವರು ಕೆಥೋಲಿಕ್ ಅಸೋಸಿಯೇಶನ್ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದರು.

ಭಾರತೀಯ ವಾಯುಪಡೆ ವಿಶೇಷ ವಿಮಾನದಲ್ಲಿ ಆಗಮಿಸಿದ ಉಪರಾಷ್ಟ್ರಪತಿಯವರನ್ನು ವಿಮಾನನಿಲ್ದಾಣದಲ್ಲಿ ರಾಜ್ಯಪಾಲ ವಜೂಬಾಯಿ ರೂಡಾಬಾಯಿವಾಲ ಅವರು ಮೊದಲು ಹೂಗುಚ್ಛಗಳನ್ನು ನೀಡಿ ಸ್ವಾಗತಿಸಿದರು.

Vice_President_Mlore_2 Vice_President_Mlore_3 Vice_President_Mlore_4 Vice_President_Mlore_5 Vice_President_Mlore_6 Vice_President_Mlore_7 Vice_President_Mlore_8

ಬಳಿಕ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಮಹಾನಗರಪಾಲಿಕೆ ಮೇಯರ್ ಮಹಾಬಲ ಮಾರ್ಲ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತೆ ವಿ.ರಶ್ಮಿ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಪೊಲೀಸ್ ಆಯುಕ್ತ ಆರ್.ಹಿತೇಂದ್ರ, ಎನ್.ಸಿ.ಸಿ. ಗ್ರೂಪ್ ಕಮಾಂಡರ್ ಎಸ್.ಆರ್. ಶ್ರೀರಾಂ ಅವರು ಸ್ವಾಗತಿಸಿದರು.

ಬಳಿಕ ಉಪರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಬಿಗಿಭದ್ರತೆಯಲ್ಲಿ ಸರ್ಕ್ಯುಟ್ ಹೌಸ್‌ಗೆ ಆಗಮಿಸಿದರು.

Write A Comment