ಕರಾವಳಿ

ಬೀದರ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ : ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ.ಜಿಲ್ಲಾ ಪತ್ರಕರ್ತರ ಸಂಘದಿಂದ ಮನವಿ

Pinterest LinkedIn Tumblr

Reporters_manavi_1

ಮಂಗಳೂರು : ಬೀದರ್ ಜಿಲ್ಲೆಯ ಚಿಗುಗುಪ್ಪದಲ್ಲಿ ಖಸಾಯಿಖಾನೆಯೊಂದಕ್ಕೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸ ಬೇಕು. ಇದರ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಘದ ವತಿಯಿಂದ ದ.ಕ.ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ.ಆರ್., ಸಂಘದ ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ವೆಂಕಟೇಶ್ ಬಂಟ್ವಾಳ್, ಯೋಗೀಶ್ ಹೊಳ್ಳ, ಮನವಿ ನೀಡಿದ ನಿಯೋಗದಲ್ಲಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿ ಸ್ವೀಕರಿಸಿದರು.

ಬೀದರ್‌ನಲ್ಲಿ ವರದಿಗಾರನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Camar_man_Protest_M

ಮಂಗಳೂರು: ನಕಲಿ ಡಾಲ್ಡಾ ದಂಧೆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರನ್ನು ನಾಲ್ಕುಗಂಟೆಗಳ ಕಾಲ ದಿಗ್ಭಂಧನದಲ್ಲಿಟ್ಟು ಹಲ್ಲೆ ನಡೆಸಿದ ಪ್ರಕರಣದ ವಿರುದ್ಧ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ದೃಶ್ಯ ಮಾಧ್ಯಮದ ವರದಿಗಾರರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಅಗ್ರಹಿಸಿದರು. ದೃಶ್ಯಮಾಧ್ಯಮದ ವರದಿಗಾರರಾದ ತಾರಾನಾಥ ಕಾಪಿಕಾಡ್, ಸುಖ್‌ಪಾಲ್ ಪೊಳಲಿ, ರಾಜೇಶ್, ಅರ್ಶಾದ್, ವಿಲ್ಪ್ರೇಡ್, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Write A Comment