ಕರಾವಳಿ

ಕೊಣಾಜೆ :ಅಪರಿಚಿತ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

Pinterest LinkedIn Tumblr

 Konaje_Stab_Ibrahim

ಕೊಣಾಜೆ, ಸೆ.26: ವಿಟ್ಲದ ಯುವಕನೊಬ್ಬನಿಗೆ  ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಜೀರ್ ಸಮೀಪ ಗುರುವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ವಿಟ್ಲ ಕೋಡಪದವು ನಿವಾಸಿ ಇಬ್ರಾಹೀಂ (28) ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಮೊಬೈಲ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಇಬ್ರಾಹೀಂ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ರಾಹೀಂ ಪಜೀರ್ ಬಳಿ ತಲುಪುತ್ತಿದ್ದಂತೆ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಹಿಂಭಾಗ ದಿಂದ ಸೊಂಟಕ್ಕೆ ಚೂರಿಯಿಂದ ಇರಿದು ಪರಾರಿಯಾದರೆನ್ನಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕೊಣಾಜೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Write A Comment